ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಮ್ಮ ಕರಾವಳಿ ಮೂಲದ ಹುಡುಗಿ ಆಗಿರುವ ಅನುಷ್ಕಾ ಶೆಟ್ಟಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ಯಾರ ಶಿಫಾರಸು ಇಲ್ಲದೆ ತಮ್ಮ ಸ್ವಂತ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ನಟಿಸಿ ಈಗ ಲೇಡಿ ಸೂಪರ್ ಸ್ಟಾರ್ ಆಗಿ ಕೂಡ ಕಾಣಿಸಿಕೊಂಡಿದ್ದಾರೆ. ಈಗಾಗಲೇ ತೆಲುಗು ಚಿತ್ರರಂಗದಲ್ಲಿ ಹಲವಾರು ವರ್ಷಗಳನ್ನು ಕಳೆದಿದ್ದಾರೆ.
ಬಹುತೇಕ ತೆಲುಗು ಚಿತ್ರರಂಗದ ಎಲ್ಲಾ ಸೂಪರ್ ಸ್ಟಾರ್ ನಟರೊಂದಿಗೆ ಕೂಡ ನಟಿಸಿರುವ ಅನುಷ್ಕಾ ಶೆಟ್ಟಿ ಬಾಹುಬಲಿ ಚಿತ್ರದ ಮೂಲಕ ದೇಶ-ವಿದೇಶಗಳಲ್ಲಿ ಕೂಡ ತಮ್ಮ ಜನಪ್ರಿಯತೆಯನ್ನು ವಿಸ್ತರಿಸಿಕೊಂಡಿದ್ದಾರೆ. ಅನುಷ್ಕಾ ಶೆಟ್ಟಿ ಅವರು ಮಹಿಳಾ ಪ್ರಾಧಾನ್ಯತೆ ಹೊಂದಿರುವ ಪಾತ್ರಗಳಲ್ಲಿ ಕೂಡ ನಟಿಸಿ ತಮ್ಮ ನಟನಾ ಸಾಮರ್ಥ್ಯವನ್ನು ಸಾಬೀತು ಪಡಿಸಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಅನುಷ್ಕಾ ಶೆಟ್ಟಿ ಅವರು ಹೆಚ್ಚಿನ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಒಂದು ಲೆಕ್ಕದಲ್ಲಿ ಹೇಳುವುದಾದರೆ ಚಿತ್ರರಂಗದಿಂದ ಕೊಂಚ ಮಟ್ಟಿಗೆ ವಿರಾಮವನ್ನು ಪಡೆದುಕೊಂಡು ಫ್ಯಾಮಿಲಿ ಜೊತೆಗೆ ಕ್ವಾಲಿಟಿ ಸಮಯವನ್ನು ಸ್ಪೆಂಡ್ ಮಾಡುತ್ತಿದ್ದಾರೆ ಎಂದು ಹೇಳಬಹುದಾಗಿದೆ. ಇದೇ ಸಂದರ್ಭದಲ್ಲಿ ಇತ್ತೀಚಿಗೆ ನಟಿ ಅನುಷ್ಕಾ ಶೆಟ್ಟಿ ಅವರು ಚಿತ್ರರಂಗದ ಕುರಿತಂತೆ ಇರುವಂತಹ ನಗ್ನ ಸತ್ಯವನ್ನು ಬಿಚ್ಚಿಟ್ಟಿದ್ದಾರೆ.
ಹೌದು ಕೇವಲ ತೆಲುಗು ಚಿತ್ರರಂಗದಲ್ಲಿ ಮಾತ್ರವಲ್ಲದೆ ಭಾರತೀಯ ಚಿತ್ರರಂಗದ ಪ್ರಮುಖ ಭಾಷೆಗಳಲ್ಲಿ ಇಂದಿಗೂ ಕೂಡ ಕಾಸ್ಟಿಂಗ್ ಕೌಚ್ ಇದೆ. ಇದರಿಂದಾಗಿ ಹೊಸ ಹೊಸ ನಟಿಯರು ಚಿತ್ರರಂಗಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ ಎಂಬುದಾಗಿ ಕೂಡ ಅನುಷ್ಕ ಶೆಟ್ಟಿ ಅವರು ಹೇಳಿದ್ದಾರೆ. ಕಾಸ್ಟಿಂಗ್ ಕೌಚ್ ಪದ್ಧತಿ ಭಾರತೀಯ ಚಿತ್ರರಂಗದಲ್ಲಿ ಒಂದು ಕಪ್ಪು ಚುಕ್ಕಿಯಾಗಿ ಇಂದಿಗೂ ಕೂಡ ಉಳಿದಿರುವುದು ವಿಷಾದಕರ ಸಂಗತಿಯಾಗಿದೆ.
